ಬ್ರಿಡ್ಜ್ ಮೇಲಿಂದ ಬಿದ್ದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಗುಡಿಹಾಳ ಸೇತುವೆ ಬಳಿ ನಡೆದಿದೆ.
ಹೆಗ್ಗೆರಿ ಜಗದೀಶ್ ನಗರದ ನಿವಾಸಿ 21 ವರ್ಷದ ಅವಿನಾಶ್ ಮೂದಿ ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಯುವತಿ ಅವಿನಾಶ್ ನನ್ನು ನಿರಾಕರಿಸಿದ್ದಳು. ಹೀಗಾಗಿ ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಅವಿನಾಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತು ಹಳೇ ಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಯುವಕನ ಶವವನ್ನು ಮರಣ್ಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.