ಮಂಗಳೂರು: ಜಮ್ಮು ಕಾಶ್ಮೀರದ ಪೆಹಲ್ಗಾಮ್ ನಲ್ಲಿ ನಡೆದ ದಾಳಿ ಖಂಡಿಸಿ, ವಿಶ್ವ ಹಿಂದೂ ಪರಿಷತ್ ನಿಂದ ನಗರದ ಉಳ್ಳಾಲ್ ಮುಖ್ಯ ರಸ್ತೆಯ ಮಂಗಳೂರು ಕಾಲೇಜು ಬಳಿ ಬೃಹತ್ ಪ್ರತಿಭಟನೆ ನಡೆಸಲಾಗಿದೆ.
ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಸೇರಿದ್ದರು. ಈ ವೇಳೆ ಮೇಣಬತ್ತಿ ಹಚ್ಚಿ ದಾಳಿಯಲ್ಲಿ ಸಾವನ್ನಪ್ಪಿದ್ದವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಜೊತೆಗೆ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರಿಂದ ಪಂಜಿನ ಮೆರವಣಿಗೆ ನಡೆಸಲಾಯಿತು.