ಬೆಂಗಳೂರು: 5 ಗ್ಯಾರಂಟಿಗಳನ್ನು ಕೊಟ್ಟ ರಾಜ್ಯ ಸರ್ಕಾರ ಮತ್ತೊಂದು ಭಾಗ್ಯ ಕರುಣಿಸಲು ಮುಂದಾಗಿದೆ.
ಈಗ ವಿದ್ಯಾರ್ಥಿಗಳಿಗೆ ಕೊಡುಗೆ ನೀಡಲು ಮುಂದಾಗಿದೆ. ಹಿಂದೆ ರಾಜ್ಯ ಸರ್ಕಾರ ಶಾಲಾ ವಿದ್ಯಾರ್ಥಿಗಳಿಗಾಗಿ ಸೈಕಲ್ ಭಾಗ್ಯ ಕರುಣಿಸಿತ್ತು. ಆದರೆ, ಕಳೆದ 8 ವರ್ಷಗಳಿಂದಲೂ ಆ ಯೋಜನೆ ನೆನೆಗುದಿಗೆ ಬಿದ್ದಿತ್ತು. ಈಗ ಮತ್ತೆ ರಾಜ್ಯ ಸರ್ಕಾರ ಸೈಕಲ್ ಭಾಗ್ಯ ಕರುಣಿಸಲು ಮುಂದಾಗಿದೆ. ಸದ್ಯಕ್ಕೆ ಬಿಬಿಎಂಪಿ ವ್ಯಾಪ್ತಿಯಲ್ಲಿನ ವಿದ್ಯಾರ್ಥಿಗಳಿಗೆ ಈ ಭಾಗ್ಯ ಸಿಗುವ ಸಾಧ್ಯತೆ ಇದೆ. ಈ ಕುರಿತು ಈಗಾಗಲೇ ಬಿಬಿಎಂಪಿ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿದೆ ಎನ್ನಲಾಗಿದೆ.



















