ಬೆಳಗಾವಿ: ಸಿಎಂ ಸಿದ್ದರಾಮಯ್ಯ ಭಾಷಣದ ವೇಳೆ ಬಿಜೆಪಿ ಕಾರ್ಯಕರ್ತ ಅಡ್ಡಿ ವಿಚಾರವಾಗಿ ಬೆಳಗಾವಿಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಪ್ರತಿಕ್ರಿಯೆ ಮಾಡಿದ್ದಾರೆ.
ಬಿಜೆಪಿ ನಾಯಕರಿಗೆ ನಾನು ಹೇಳಲು ಬಯಸೋದು ಏನಂದ್ರೆ ರಾಜ್ಯದಲ್ಲಿ ಬಿಜೆಪಿಯವರಿಗೆ ಒಂದೇ ಒಂದು ಸಭೆ ಮಾಡಲು ಬಿಡಲ್ಲ. ಇದು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ. ನಿಮಗಿಂತ ಕಾರ್ಯರೂಪ ಮಾಡುವ ಶಕ್ತಿ ಜನ ನನಗೆ ಕೊಟ್ಟಿದ್ದಾರೆ. ನಿಮ್ಮ ಇದೇ ವರ್ತನೆಯನ್ನು ಮುಂದುವರೆಸಿದರೆ ಪರಿಣಾಮ ಸರಿ ಇರಲ್ಲ ಎಂದು ವಾರ್ನಿಂಗ್ ನೀಡಿದ್ದಾರೆ.