ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರ ಅಧಿಕಾರವಧಿಯನ್ನು ಮೇ 21ರ ವರೆಗೆ ವಿಸ್ತರಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಏ. 29ರಂದು ನಿವೃತ್ತಿ ಹೊಂದಲಿದ್ದರು. ಆದರೆ, ಸರ್ಕಾರವು ಅವರ ಅಧಿಕಾರವಧಿಯನ್ನು ಮುಂದುವರೆಸಿ ಆದೇಶ ನೀಡಿದೆ. ಮೇ 21ರ ವರೆಗೂ ಮುಂದುವರೆಸಲು ಸರ್ಕಾರ ನಿರ್ಧರಿಸಿದೆ. ಅಲೋಕ್ ಮೋಹನ್ ಅವರು 2023ರ ಮೇ 21ರಂದು ಅಧಿಕಾರ ವಹಿಸಿಕೊಂಡಿದ್ದರು. ಹೀಗಾಗಿ 2025ರ ಮೇ. 21ರ ವರೆಗೂ ಮುಂದುವರೆಸಲು ನಿರ್ಧರಿಸಲಾಗಿದೆ. ಆ ಬಳಿಕ ನೂತನ ಡಿಜಿ & ಐಜಿಪಿ ನೇಮಕ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ.
ಸದ್ಯ ಡಿಜಿಪಿ ರೇಸ್ ನಲ್ಲಿರುವ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳು ಕುರ್ಚಿಗಾಗಿ ಪೈಪೋಟಿ ನಡೆಸುತ್ತಿದ್ದಾರೆ. ಪ್ರಶಾಂತ್ ಕುಮಾರ್ ಠಾಕೂರ್ ಹಾಗೂ ಎಂ.ಎ. ಸಲೀಂ ಡಿಜಿಪಿ ರೇಸ್ ನಲ್ಲಿದ್ದಾರೆ.



















