ಪ್ರಧಾನಿ ನರೇಂದ್ರ ಮೋದಿ ಇಂದು ಸರಣಿ ಸಭೆಗಳಲ್ಲಿ ಭಾಗಿಯಾಗಲಿದ್ದಾರೆ.
ಪಹಲ್ಗಾಮ್ ನಲ್ಲಿ ನಡೆದ ನರಮೇಧ ಹತ್ಯಾಕಾಂಡದ ಕುರಿತು ಈಗಾಗಲೇ ಸರ್ವಪಕ್ಷ ಸಭೆ ನಡೆದಿದ್ದು, ಇಂದು ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರು ಮೊದಲಿಗೆ ಭದ್ರತಾ ಇಲಾಖೆಯ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.
ಬಳಿಕ ಆರ್ಥಿಕ ಇಲಾಖೆಯ ಸಚಿವರನ್ನೊಳಗೊಂಡಂತೆ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ಇನ್ನು ಸಂಜೆ 4 ಘಂಟೆಗೆ ವಿಶೇಷವಾದ ಕೇಂದ್ರ ಸಚಿವ ಸಂಪುಟ ಸಭೆಯನ್ನು ಮೋದಿ ಕರೆದಿದ್ದು, ಇಂದು ಸರಣಿ ಸಭೆಗಳಲ್ಲಿ ಅವರು ಭಾಗಿಯಾಗಲಿದ್ದಾರೆ.



















