ಚಾಮರಾಜನಗರ: ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಬಂದಿರುವ ವಿಷಯವಾಗಿ ಎಸ್ಪಿ ಡಾ. ಕವಿತಾ ಮಾತನಾಡಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಜಿಲ್ಲಾಧಿಕಾರಿ ಕಚೇರಿಗೆ ಮೇಲ್ ಬಂದಿದೆ. ಮೂರು ಗಂಟೆಯೊಳಗೆ ಖಾಲಿ ಮಾಡಬೇಕು, ಮದ್ಯಾಹ್ನ 3 ಗಂಟೆಯೊಳಗೆ ಬಾಂಬ್ ಬ್ಲಾಸ್ಟ್ ಮಾಡ್ತೀವಿ ಅಂತ ಮೇಲ್ ನಲ್ಲಿ ತಿಳಿಸಲಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿತ್ತು. ಎಲ್ಲ ನೌಕರರನ್ನು ಸಾರ್ವಜನಿಕರನ್ನು ಡಿಸಿ ಕಚೇರಿಯಿಂದ ಹೊರ ಕಳುಹಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಿಂದ ಶೋಧ ಕಾರ್ಯ ನಡೆಸಲಾಗಿದೆ. ಎಲ್ಲ ಆಯಾಮಗಳಲ್ಲು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ಅಲ್ಲದೇ, ಜಿಲ್ಲಾಧಿಕಾರಿ ಕಚೇರಿಯಷ್ಟೇ ಅಲ್ಲ, ಸುತ್ತಮುತ್ತ ಪ್ರದೇಶದ ಕಟ್ಟಡಗಳಲ್ಲಿ ತಪಾಸಣೆ ನಡೆಸಲಾಗುವುದು ಎಂದು ಜಿಲ್ಲಾ ವರಿಷ್ಠಾಧಿಕಾರಿ ಡಾ. ಕವಿತಾ ಹೇಳಿದ್ದಾರೆ.