ಮಂಗಳೂರು: ಬರ್ಬರವಾಗಿ ಹತ್ಯೆಯಾಗಿರುವ ಸುಹಾಸ್ ಶೆಟ್ಟಿ (Suhas Shetty) ಕುಟುಂಬಕ್ಕೆ ಬಿಜೆಪಿಯಿಂದ 25 ಲಕ್ಷ ರೂ. ಪರಿಹಾರ ನೀಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಹೇಳಿದ್ದಾರೆ.
ಸುಹಾಸ್ ಶೆಟ್ಟಿ ಅಂತಿಮ ದರ್ಶನ ಪಡೆದ ನಂತರ ಮಾತನಾಡಿದ ಅವರು, ಕಾಶ್ಮೀರ ಪಹಲ್ಗಾಮ್ ಹತ್ಯೆ ಮರೆಯುವ ಮೊದಲೇ ಮಂಗಳೂರಿನಲ್ಲಿ ಘಟನೆ ನಡೆದಿರುವುದು ಖಂಡನಾರ್ಹ. ಬಿಜೆಪಿ ಈ ಘಟನೆಯನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದೆ. ಪೊಲೀಸ್ ಇಲಾಖೆ ವೈಫಲ್ಯ ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಇಲ್ಲಿ ಜೀವಕ್ಕೆ ರಕ್ಷಣೆ ಇಲ್ಲದಂತಾಗಿದೆ. ಕಾಂಗ್ರೆಸ್ ನಿಂದಾಗಿ ಹಿಂದೂಗಳಿಗೆ ರಕ್ಷಣೆ ಇಲ್ಲದಾಗಿದೆ. ಬಿಜೆಪಿಯ ಮುಖಂಡರು, ಕಾರ್ಯಕರ್ತರು ಅವರ ಕುಟುಂಬದ ಜೊತೆ ಇದ್ದೇವೆ. ಕುಟುಂಬದ ಆಧಾರ ಸ್ತಂಬ ಕಳಚಿದಂತಾಗಿದೆ ಎಂದಿದ್ದಾರೆ.