ಚಿಕ್ಕೋಡಿ: ಕೃಷಿ ಹೊಂಡದಲ್ಲಿ ಬಿದ್ದು ಮೂವರು ಬಾಲಕರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ನಡೆದಿದೆ.

ಇಂಗಳಿ ಗ್ರಾಮದ ಪ್ರಥಮೇಶ ಕೆರಬಾ (13) ಅಥರ್ವ ಸೌಂದಲಗೆ (15) ಸಮರ್ಥ ಚೌಗಲೆ (13) ಸಾವನ್ನಪ್ಪಿರುವ ದುರ್ದೈವ ಬಾಲಕರು. ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಸಂದರ್ಭದಲ್ಲಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ. ಬಾಲಕರು ಮನೆಗೆ ಬಾರದಿದ್ದಾಗ ಪೋಷಕರು ಆತಂಕಗೊಂಡು ಹುಡುಕಾಟ ಆರಂಭಿಸಿದ್ದಾರೆ. ನಂತರ ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಚಿಕ್ಕೋಡಿ ತಹಸೀಲ್ದಾರ್ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಸತ್ಯ ಘಟನೆ ಬೆಳಕಿಗೆ ಬಂದಿದೆ.

ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಸ್ಥಳದಲ್ಲಿ ಮುಗಿಲು ಮುಟ್ಟಿದೆ. ಈ ಕುರಿತು ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.