ಚಿತ್ರದುರ್ಗ: ಕ್ಷುಲ್ಲಕ ಕಾರಣಕ್ಕೆ ಮಾವನೇ ಅಳಿಯನಿಗೆ ಚಾಕು ಇರಿದಿರುವ ಘಟನೆ ನಡೆದಿದೆ.
ಈ ಘಟನೆ ಹಿರಿಯೂರು ನಗರದ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಅಳಿಯನಿಗೆ ಚಾಕು ಇರಿದಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಚಾಕು ಇರಿದು ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೋಲೀಸರು ಬಂಧಿಸಿದ್ದಾರೆ.
ಜಿಲ್ಲೆಯ ಹಿರಿಯೂರು ನಗರದ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಅಳಿಯ ಧಾಮೋದರ್ ಗೆ ಮಾವ ಲೋಕನಾಥ್, ದಾಮೋದರ್ ಹೊಟ್ಟೆಗೆ ಎರಡು ಭಾರಿ ಚಾಕುವಿನಿಂದ ಇರಿದು ಪರಾರಿಯಾಗಿದ್ದ ಅದಾದ ಬಳಿಕ ಹಿರಿಯೂರು ಪೋಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದರು. ಇದೀಗ ನಗರ ಠಾಣೆ PSI ರಾಘವೇಂದ್ರ ಕಾಂಡಿಕೆ ನೇತೃತ್ವದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಗಾಯಗೊಂಡ ಧಾಮೋದರ್‌ನನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು. ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



















