ಬೆಂಗಳೂರು: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಕಂಪನಿ ಕಾರ್ಯದರ್ಶಿ ಹುದ್ದೆಯ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪದವೀಧರರಿಗೆ ಉದ್ಯೋಗ ಪಡೆಯಲು ಒಳ್ಳೆಯ ಅವಕಾಶವಿದೆ. ಮೇ 23 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಕೆ ಹಾಗೂ ಹೆಚ್ಚಿನ ಮಾಹಿತಿಗೆ https://www.kioclltd.in/ ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.
ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 90,000-2,80,000 ರೂಪಾಯಿವರೆಗೆ ವೇತನ ನಿಗದಿಪಡಿಸಲಾಗಿದೆ. ಗರಿಷ್ಠ 51 ವರ್ಷದ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸುವ ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಜನರಲ್, ಒಬಿಸಿ ಸೇರಿ ಎಲ್ಲ ವರ್ಗದವರಿಗೆ 500 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಕೆಲಸದ ಅನುಭವ ಇದ್ದವರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಅಧಿಕೃತ ವೆಬ್ಸೈಟ್ https://www.kioclltd.in/ಗೆ ಭೇಟಿ ನೀಡಿ
- ಪ್ರಾಜೆಕ್ಟ್ ಸೈಂಟಿಸ್ಟ್ I ಹುದ್ದೆಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅರ್ಜಿ ಸಲ್ಲಿಸಿ, ಅರ್ಜಿ ನಮೂನೆಯ ಸಂಖ್ಯೆ ಅಥವಾ ಕೊರಿಯರ್ ಸ್ವೀಕೃತಿ ಸಂಖ್ಯೆಯನ್ನು ಸುರಕ್ಷಿತವಾಗಿಡಬೇಕು.



















