ಮಂಡ್ಯ : ಹಳೇ ದ್ವೇಷದ ಹಿನ್ನೆಲೆಯಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಪಾಂಡವಪುರದ ಮಾಣಿಕ್ಯನಹಳ್ಳಿ ಗೇಟ್ ಬಳಿ ಈ ಘಟನೆ ನಡೆದಿದೆ. ಮಾಣಿಕ್ಯನಹಳ್ಳಿ ಗ್ರಾಮದ ನರಸಿಂಹ ಹತ್ಯೆಯಾಗಿರುವ ವ್ಯಕ್ತಿ. ಅದೇ ಗ್ರಾಮದ ವೆಂಕಟೇಶ್ ಹತ್ಯೆ ಮಾಡಿರುವ ವ್ಯಕ್ತಿ ಎನ್ನಲಾಗಿದೆ. ಎರಡು ಕುಟುಂಬಗಳ ಮಧ್ಯೆ ಹಲವು ವರ್ಷಗಳಿಂದ ವೈಷಮ್ಯ ಇತ್ತು ಎನ್ನಲಾಗಿದೆ.
ಸ್ಥಳಕ್ಕೆ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.