ಯಾದಗಿರಿ: ಮೇವಿನ ಬಣವಿಗಳಿಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಪರಸನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಜಾನುವಾರುಗಳಿಗೆ ಸಂಗ್ರಹಿಸಿಟ್ಟಿದ ಹತ್ತಾರು ಬಣವೆಗಳು ಬೆಂಕಿಗೆ ಆಹುತಿಯಾಗಿ ಸುಟ್ಟು ಕರಕಲಾಗಿವೆ.
ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಸಾಧ್ಯತೆ ಇದ್ದು, ಕೂಡಲೇ ಅಂಥವರನ್ನು ಪತ್ತೆ ಹಚ್ಚಬೇಕೆಂದು ರೈತರು ಆಗ್ರಹಿಸಿದ್ದಾರೆ. ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.