ಮಂಗಳೂರು: ಸುಹಾಸ್ ಶೆಟ್ಟಿ(Suhas Shetty) ಕೊಲೆ ಪ್ರಕರಣದಲ್ಲಿ ಮುಸ್ಲಿಂ ಸಮುದಾಯದ ಹೆಡ್ ಕಾನ್ಸ್‌ಟೇಬಲ್ ಭಾಗಿಯಾಗಿದ್ದಾರೆಂದು ಆರೋಪಿಸಿ, ಪೋಸ್ಟ್ ಹಾಕಿದ್ದ ಇಬ್ಬರು ಹಿಂದೂ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಹಿಂದೂ ಮುಖಂಡ ಮೂಡಬಿದ್ರೆಯ(Moodabidri) ಸಮಿತ್ ರಾಜ್ ದರೆಗುಡ್ಡೆ ಹಾಗೂ ಹಿಂದೂ ಜಾಗರಣ ವೇದಿಕೆ ಪ್ರಾಂತ ಸಂಚಾಲಕ ಉಲ್ಲಾಸ್ ಕೆ.ಟಿ ವಿರುದ್ಧ ಬಜಪೆ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಬಜಪೆ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ರಶೀದ್ ಕೈವಾಡ ಇದೆ ಎಂದು ಪೋಸ್ಟ್ ಹಾಕಿದ್ದರು.
ಇದಕ್ಕೆ ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ವಿನಾಕಾರಣ ನನ್ನ ಹೆಸರು ಎಳೆದು ತಂದಿದ್ದಾರೆ. ಯಾವುದೇ ಆಧಾರ ಇಲ್ಲದೆ ನನ್ನ ಹೆಸರು ಹಾಕಿ ಅವಹೇಳನ ಮಾಡಿದ್ದಾರೆಂದು ರಶೀದ್ ದೂರು ನೀಡಿದ್ದರು. ಈ ದೂರಿನ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಎಫ್ ಐಆರ್ ದಾಖಲಾಗಿದೆ.



















