ಹಿಟ್ ಆಂಡ್ ರನ್ ಗೆ ಬೈಕ್ ಹಿಂಬದಿ ಸವಾರ ಬಲಿಯಾಗಿರುವ ಘಟನೆ ನಡೆದಿದೆ.
ಕೆಜಿಎಫ್ ಮೂಲದ ಡಿ. ವೇಲು ಸಾವನ್ನಪ್ಪಿರುವ ಹಿಂಬದಿ ಸವಾರ ಎನ್ನಲಾಗಿದೆ. ದೇವನಹಳ್ಳಿಯ ಪೂಜೇನಹಳ್ಳಿ ಗೇಟ್ ಬಳಿ ಈ ದುರ್ಘಟನೆ ಸಂಭವಿಸಿದೆ. ಕೆಲಸ ಮುಗಿಸಿ ಬೈಕ್ ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಇಬ್ಬರು ಸವಾರರು ಸಾವನ್ನಪ್ಪಿದ್ದಾರೆ.
ಅನಂತ್ ಎಂಬಾತ ಬೈಕ್ ಓಡಿಸುತ್ತಿದ್ದ. ವೇಲು ಹಿಂಭಾಗದಲ್ಲಿ ಕುಳಿತಿದ್ದರು. ಈ ವೇಳೆ ವೇಗವಾಗಿ ಬಂದಿದ್ದ ಕಾರು, ಬೈಕ್ ಗೆ ಡಿಕ್ಕಿ ಹೊಡೆದಿದೆ. ಅಪರಿಚಿತ ಕಾರು, ಡಿಕ್ಕಿ ಹೊಡೆದ ರಭಸಕ್ಕೆ ಹಿಂಬದಿ ಸವಾರ ವೇಲು ಸಾವನ್ನಪ್ಪಿದ್ದಾರೆ. ಅನಂತ್ ಗಾಯಗೊಂಡಿದ್ದಾರೆ. ಇಬ್ಬರೂ ದೇವಹನಹಳ್ಳಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಅಪಘಾತ ಎಸಗಿದ ವ್ಯಕ್ತಿ ಕಾರು ಸಮೇತ ಪರಾರಿಯಾಗಿದ್ದಾರೆ. ದೇವನಹಳ್ಳಿ ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.