ನವದೆಹಲಿ: ಅಂತಾರಾಷ್ಟ್ರೀಯ ಹಣಕಾಸು ನಿಧಿ ಬಿಕಾರಿ ಪಾಕಿಸ್ತಾನಕ್ಕೆ ಭಾರತದ ವಿರೋಧದ ಮಧ್ಯೆಯೂ 19 ಸಾವಿರ ಕೋಟಿ ರೂ. ಸಾಲ ನೀಡಿದೆ.
ಐಎಂಎಫ್ ಕಾರ್ಯಕಾರಿ ಮಂಡಳಿಯು ತನ್ನ ವಿಸ್ತೃತ ನಿಧಿ ಸೌಲಭ್ಯ (EFF) ಅಡಿಯಲ್ಲಿ 1 ಬಿಲಿಯನ್ ಡಾಲರ್‌ಗಳ ಎರಡನೇ ಸಾಲದ ಕಂತನ್ನು ಬಿಡುಗಡೆ ಮಾಡಿದೆ. ಆದರೆ, ಇಎಫ್ ಎಫ್ ನಿರ್ಧಾರವನ್ನು ಭಾರತವು ತೀವ್ರವಾಗಿ ಖಂಡಿಸಿದೆ. ಇದು ಭಯೋತ್ಪಾದನೆಗೆ ಹಣಕಾಸಿನ ನೆರವು ಎಂದು ಆಕ್ರೋಶ ವ್ಯಕ್ತಪಡಿಸಿದೆ. ಪಾಕಿಸ್ತಾನಕ್ಕೆ ಹಣಕಾಸಿನ ಸಹಾಯ ಮಾಡುವ ವಿಚರಾವಾಗಿ ಭಾರತ ಮತದಾನದಿಂದ ದೂರ ಉಳಿಯಿತು.
ಐಎಂಎಫ್ ಸಾಲಗಳನ್ನು ಪರಿಣಾಮಕಾರಿಯಾಗಿ ಬಳಸುವಲ್ಲಿ ಪಾಕಿಸ್ತಾನದ ನಿರಂತರ ವೈಫಲ್ಯದ ಬಗ್ಗೆ ಭಾರತ ಎಚ್ಚರಿಕೆ ನೀಡಿತ್ತು. ಪಾಕಿಸ್ತಾನವು ಆರ್ಥಿಕ ಅಸ್ಥಿರತೆಯನ್ನು ಎದುರಿಸುತ್ತಲೇ ಇದೆ ಎಂದು ಭಾರತ ಎತ್ತಿ ತೋರಿಸಿದೆ. ಆದರೂ ಸಾಲ ನೀಡಿರುವುದು ಕಳವಳ ಎಂದು ಭಾರತ ತೀವ್ರ ವಿರೋಧ ವ್ಯಕ್ತಪಡಿಸಿದೆ.