ಬೆಂಗಳೂರು: ರೌಡಿಬೇಬಿ ಎಂದೇ ಖ್ಯಾತಿ ಹೊಂದಿದ್ದ ಕಿರುತೆರೆ ನಟಿ ನಿಶಾ ರವಿಕೃಷ್ಣನ್ ಕನ್ನಡ ಹಾಗೂ ತೆಲುಗು ಸೇರಿದಂತೆ ಸಾಕಷ್ಟು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಈಗ ಮನೆ ಕಟ್ಟಿಸಿದ ವಿಷಯಕ್ಕೆ ನಟಿ ದೊಡ್ಡ ಸದ್ದು ಮಾಡುತ್ತಿದ್ದಾರೆ.

ನಟಿ ನಿಶಾ ತಮ್ಮ ಇಷ್ಟು ವರ್ಷಗಳ ಕಾಲ ದುಡಿದ ಹಣದಲ್ಲಿ ಹೊಸ ಮನೆಯನ್ನು ಕಟ್ಟಿಸಿ ಗೃಹ ಪ್ರವೇಶ ಮಾಡಿದ್ದಾರೆ. ಗೃಹಪ್ರವೇಶದ ವೇಳೆ ತಮ್ಮ ಫ್ಯಾಮಿಲಿಯೊಂದಿಗೆ ತೆಗೆಸಿಕೊಂಡ ಫೋಟೋಸ್ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಇದನ್ನು ಕಂಡು ನೆಟ್ಟಿಗರು ಶುಭಾಶಯ ತಿಳಿಸುತ್ತಿದ್ದಾರೆ.

ನಟಿ ನಿಶಾ ಇದೀಗ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಅಣ್ಣಯ್ಯ ಸೀರಿಯಲ್‌ನಲ್ಲಿ ಪಾರು ಪಾತ್ರದಲ್ಲಿ ಮಿಂಚುತ್ತಿದ್ದಾರೆ. ನಿಶಾ ಅವರು ಸರ್ವ ಮಂಗಳ ಮಾಂಗಲ್ಯೆ, ಗಟ್ಟಿಮೇಳ ಸೇರಿದಂತೆ ಸಾಕಷ್ಟು ಸೀರಿಯಲ್‌ಗಳಲ್ಲಿ ಅಭಿನಯಿಸುವುದರ ಜೊತೆಗೆ ಕೆಲವು ರಿಯಾಲಿಟಿ ಶೋಗಳಲ್ಲೂ ಭಾಗಿಯಾಗಿದ್ದರು.