ತುಮಕೂರು: ಭಾರತ ಮತ್ತು ಪಾಕಿಸ್ತಾನ ನಡುವೆ ಸಂಘರ್ಷ ಶುರುವಾದ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ.

ಜಿಲ್ಲೆಯ ಹಲವು ಕಡೆ ಮಾಕ್ ಡ್ರಿಲ್ ಮಾಡಿ, ತುರ್ತು ಸಂದರ್ಭಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತಯಾರಿ ನಡೆಸಲಾಗಿದೆ. ಜೊತೆಗೆ ಇವತ್ತು ಕೆಲವು ಸಾರ್ವಜನಿಕ ಸ್ಥಳಗಳು ಹಾಗೂ ರೈಲ್ವೆ ಸ್ಟೇಷನ್, ಕೆ.ಎಸ್.ಆರ್.ಟಿ.ಸಿ ಬಸ್ ಸ್ಟ್ಯಾಂಡ್, ಎಸ್ ಮಾಲ್, ಪರಿವೀಕ್ಷಣಾ ಮಂದಿರ ಸೇರಿದಂತೆ ಹಲವು ಸ್ಥಳಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.