ಭಾರತ -ಪಾಕಿಸ್ಥಾನ ನಡುವೆ ಉದ್ವಿಗ್ನ ಪರಿಸ್ಥಿತಿ ಮುಂದುವರೆದಿರುವ ಕಾರಣ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಹೆಚ್ಚಿನ ನಿಗಾ ವಹಿಸುವಂತೆ ಸರ್ಕಾರ ಸೂಚಿಸಿದೆ.
ರಾಜ್ಯದ ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳು, ಡಿಸಿ, ಎಸ್ಪಿ, ಆಯುಕ್ತರ ಜೊತೆ ಸಿಎಂ ಸಿದ್ಧರಾಮಯ್ಯ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯನ್ನು ನಡೆಸಲಿದ್ದಾರೆ. ಈ ವೇಳೆ ಬಂದೋಬಸ್ತ್ ಹಾಗು ಕಟ್ಟುನಿಟ್ಟಿನ ಸೂಚನೆ ಕೊಡಲು ಸಿಎಂ ಮುಂದಾಗಿದ್ದು, ಕೆಲವು ಸೂಕ್ಷ್ಮವಾಗಿ ಇರುವ ಜಿಲ್ಲೆ ಹಾಗೂ ಸ್ಥಳಗಳ ಬಗ್ಗೆ ಮಾತನಾಡಲಿದ್ದಾರೆ. ಜೊತೆಗೆ ಯಾವುದೇ ಅಹಿತಕರ ಘಟನೆ ಆಗದಂತೆ ತಡೆಯಲು ಪೊಲೀಸರಿಗೆ ಸೂಚನೆಗಳನ್ನು ನೀಡಲಿದ್ದಾರೆ.


















