ಬೀದರ್ : ಬೈಕ್ ಗೆ ಐಚರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಫೈನಾನ್ಸ್ ಕಂಪನಿ ಉದ್ಯೋಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಭಾಲ್ಕಿ ತಾಲೂಕಿನ ಕಪಲಾಪೂರ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಭಾಲ್ಕಿ ತಾಲೂಕಿನ ಖುದಾಂಪುರ ನಿವಾಸಿ ಸುಶೀಲ್ ತಾನಾಜಿ ಕರವಂದೆ (22) ಸಾವನ್ನಪ್ಪಿರುವ ದುರ್ದೈವಿ ಎನ್ನಲಾಗಿದೆ. ಸುಶೀಲ್ ಬೈಕ್ ನಲ್ಲಿ ವೇಗವಾಗಿ ಹೊರಟಿದ್ದ ಸಂದರ್ಭದಲ್ಲಿ ಎದುರಿನಿಂದ ಬಂದಿದ್ದ ಐಚರ್ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪಿಎಸ್ಐ ಸುದರ್ಶನ ರೆಡ್ಡಿ ನೇತೃತ್ವದಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಖಟಕಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



















