ತುಮಕೂರು: ಇತ್ತೀಚೆಗಂತೂ ಲಂಚದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದೀಗ ಇ-ಖಾತೆ ಮಾಡಿ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟು ಹಣ ಸ್ವೀಕರಿಸುತ್ತಿದ್ದಾಗ
ಪಿಡಿಒ ಹಾಗೂ ಬಿಲ್ ಕಲೆಕ್ಟರ್ನನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡಾಗಿ ಲಾಕ್ ಮಾಡಿರುವ ಘಟನೆ ಮಧುಗಿರಿ ತಾಲೂಕಿನ ಕೋಡ್ಲಾಪುರ ಗ್ರಾಮದಲ್ಲಿ ನಡೆದಿದೆ.

ಪಿಡಿಒ ಪುಂಡಲೀಕ ಬಮಗೊಂಡ ಮತ್ತು ಬಿಲ್ ಕಲೆಕ್ಟರ್ ಹನುಮಂತರಾಯಪ್ಪ ವ್ಯಕ್ತಿಯೊಬ್ಬರಿಗೆ ಇ-ಸ್ವತ್ತು ಮಾಡಿಕೊಡೋಕೆ 6000 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಇದೀಗ ಇವರ ಮೇಲೆ ಲೋಕಾಯುಕ್ತ ಪೊಲೀಸರಿಂದ ದಾಳಿ ವಶಕ್ಕೆ ಪಡೆದಿದ್ದಾರೆ.