ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೇರೂರ ಗ್ರಾಮದಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಕಳೆದ ಐದು ದಿನಗಳಿಂದ ಗ್ರಾಮದಲ್ಲಿ ನೀರು ಬಾರದ ಹಿನ್ನೆಲೆ ಗ್ರಾಮಸ್ಥರು ಪರದಾಡುತ್ತಿದ್ದಾರೆ.

ಕೃಷ್ಣಾ ನದಿಯಿಂದ ಲಿಫ್ಟ್ ಆಗಿ ಕೇರೂರ ಗ್ರಾಮಕ್ಕೆ ಬರುವ ನೀರು ಲಿಪ್ಟ್ ಮಾಡುವ ಟಿಸಿ ಸುಟ್ಟು ನಿಂತ ಹಿನ್ನೆಲೆ, ನೀರಿಗಾಗಿ ಪರದಾಟ ಹೆಚ್ಚಾಗಿದೆ. ಟಿಸಿಯನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಮನವಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮ ಪಂಚಾಯತಿ ಸಿಬ್ಬಂದಿ ವಿರುದ್ಧ ಗ್ರಾಮಸ್ಥರು ಹಿಡಿಶಾಪ ಹಾಕುತ್ತಿದ್ದಾರೆ.