ಬಿಗ್ ಬಾಸ್ ನಂತರ ಸಾಕಷ್ಟು ಜನಪ್ರಿಯತೆ ಗಳಿಸಿರುವ ಚೈತ್ರಾ ಕುಂದಾಪುರ, ಇತ್ತಿಚೆಗಷ್ಟೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದೀಗ ಅವರ ತಂದೆಯೇ ಚೈತ್ರಾ ವಿರುದ್ಧ ಆರೋಪ ಮಾಡಿದ್ದಾರೆ. ‘ನನ್ನ ಮಗಳ ವಿವಾಹವನ್ನು ನಾನು ಒಪ್ಪಲಾರೆ. ಚೈತ್ರಾ ಹಾಗೂ ಆಕೆಯ ಪತಿ ಇಬ್ಬರೂ ಕಳ್ಳರು. ನನ್ನ ಪತ್ನಿ ಕೂಡ ನನ್ನ ಪುತ್ರಿಯ ಬೆಂಬಲಕ್ಕೆ ನಿಂತಿದ್ದಾಳೆ ಎಂದೆಲ್ಲಾ ಆರೋಪ ಮಾಡಿದ್ದಾರೆ.

ಅದರ ಬೆನ್ನಲ್ಲೇ ತಂದೆಯ ಆರೋಪಕ್ಕೆ ಚೈತ್ರಾ ಕುಂದಾಪುರ ತಿರುಗೇಟನ್ನು ನೀಡಿದ್ದಾರೆ. ‘ಕುಡುಕ ತಂದೆಯ ಚಿತ್ರ ಹಿಂಸೆ ಅನುಭವಿಸಿದವರಿಗಷ್ಟೇ ಗೊತ್ತು. ಎಂತಹ ಮಕ್ಕಳಿಗೂ ಕುಡುಕ ತಂದೆ ಸಿಗಬಾರದು. ಎರಡು ಕ್ವಾಟರ್ ನಾನು ಕೊಟ್ರೆ ನನ್ನ ಮಕ್ಕಳು ದೇವರು ಅನ್ನುವವರ ಮಾತಿಗೆ ಬೆಲೆ ಕೊಡುವವರು ಮೂರ್ಖರಾಗ್ತಾರೆ’ ಎಂದು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಚೈತ್ರಾ ಬರೆದುಕೊಂಡಿದ್ದಾರೆ. ಇದೇ ತಿಂಗಳು ಚೈತ್ರಾ ಅವರು ಶ್ರೀಕಾಂತ್ ಎಂಬುವವರ ಜೊತೆ ವಿವಾಹವಾಗಿದ್ದು. ಕಿರುತೆರೆಯ ಅನೇಕ ನಟ ನಟಿಯರು ಈ ಮದುವೆಗೆ ಸಾಕ್ಷಿಯಾಗಿದ್ದರು



















