ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ಕಾರು ಅಪಘಾತ, ಓರ್ವನಿಗೆ ಗಾಯ

ಬೆಂಗಳೂರು: ಎರಡು ಕಾರುಗಳ ನಡುವೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿರುವ ಘಟನೆ, ಎಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ಫ್ಲೈಓವರ್ ಮೇಲೆ ನಡೆದಿದೆ.

ಬೆಳಿಗ್ಗೆ 6 ಗಂಟೆ ಸುಮಾರಿಗೆ ಹೊಸೂರು ಕಡೆಯಿಂದ ಬೆಂಗಳೂರು ಮಾರ್ಗವಾಗಿ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಎದುರು ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಘಟನೆಯಲ್ಲಿ ಓರ್ವನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಅಪಘಾತ ಹಿನ್ನೆಲೆ ಫ್ಲೈ ಓವರ್ ಮೇಲೆ ಕೆಲಕಾಲ ಟ್ರಾಫಿಕ್ ಜಾಮ್ ಕೂಡ ಉಂಟಾಗಿತ್ತು.

Related Posts