ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಹಲವೆಡೆ ಜನ ಜೀವನ ಅಸ್ತವ್ಯಸ್ಥವಾಗಿದೆ. ಈ ಮಧ್ಯೆ ಹವಾಮಾನ ಇಲಾಖೆ ಮೂರು ಗಂಟೆಗಳ ಕಾಲ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಗ್ರಾಮಾಂತರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಗೆ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾತ್ರಿ 8 ಗಂಟೆಯವರೆಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.