ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿರುವ ದೂರಸಂಪರ್ಕ ಇಲಾಖೆಯಲ್ಲಿ (ಡಿಪಾರ್ಟ್ ಮೆಂಟ್ ಆಫ್ ಟೆಲಿಕಮ್ಯುನಿಕೇಷನ್ಸ್) ಐದು ರಿಸರ್ಚ್ ಅಸೋಸಿಯೇಟ್ಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಫ್ ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಮೇ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಬಿ.ಇ ಅಥವಾ ಬಿ.ಟೆಕ್ ಕೋರ್ಸ್ ಪೂರ್ಣಗೊಳಿಸಿರಬೇಕು. ದೂರಸಂಪರ್ಕ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗೆ ಕನಿಷ್ಠ 28 ವರ್ಷ ಮತ್ತು ಗರಿಷ್ಠ 35 ವರ್ಷದ ವಯೋಮಿತಿ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ನೇಮಕಾತಿ ಹೊಂದಿದ ಅಭ್ಯರ್ಥಿಗಳಿಗೆ ಮಾಸಿಕ 75 ಸಾವಿರ ರೂ. ವೇತನ ನೀಡಲಾಗುತ್ತದೆ. ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ವರ್ಷಕ್ಕೆ ಶೇ.10ರಷ್ಟು ಸಂಬಳ ಹೆಚ್ಚಳ ಮಾಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು https://dot.gov.in/ ಗೆ ಭೇಟಿ ನೀಡಬೇಕು. ಅಲ್ಲಿ ಅರ್ಜಿಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು. ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಬೇಕು. ನಂತರ ಅಗತ್ಯ ದಾಖಲೆಗಳೊಂದಿಗೆ ADET (SC & HQ), Room 301, National Centre for Communications Security, 2nd Floor, City Telephone Exchange, Sampangirama Nagar, Bangalore – 560027 ವಿಳಾಸಕ್ಕೆ ಕಳುಹಿಸಬೇಕು.