ಚಿಕ್ಕೋಡಿ: ಮಕ್ಕಳಾಗಿಲ್ಲ ಎಂದು ಪತ್ನಿಯನ್ನು ಹತ್ಯೆ ಮಾಡಿ ಬೈಕ್ ಅಪಘಾತ ಎಂದು ಬಂಬಿಸಲು ಯತ್ನಿಸಿದ ಪತಿ, ಅತ್ತೆ, ಮಾವನನ್ನು ಅಥಣಿ ಪೊಲೀಸರು ಬಂಧಿಸಿದ್ದಾರೆ.
ಅಥಣಿ ತಾಲೂಕಿನ ಮಲಬಾದ ಗ್ರಾಮದ ರೇಣುಕಾ ಸಂತೋಷ ಹೋನಕಾಂಡೆ (27) ಮೃತ ಮಹಿಳೆಯಾಗಿದ್ದು, ಸಂತೋಷ್ ಕೊಲೆ ಮಾಡಿರುವ ಆರೋಪಿ. ಅಥಣಿಯಿಂದ ಬೈಕ್ ಮೇಲೆ ಹೊರಟಾಗ ಬೈಕ್ ಚಕ್ರಕ್ಕೆ ಸೀರೆ ಸಿಲುಕಿ ಮಹಿಳೆ ಬಿದ್ದು ಸಾವನ್ನಪ್ಪಿದ್ದಾಳೆ ಎಂದು ಪೊಲೀಸರಿಗೆ ನಂಬಿಸಲು ಆರೋಪಿಗಳು ಯತ್ನಿಸಿದ್ದಾರೆ.
ಸಂಶಯಗೊಂಡ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಹೊರ ಬಿದ್ದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಸಂತೋಷ ಹೊನಕಾಂಡೆ, ಮಾವ ಕಾಮಣ್ಣ ಹಾಗೂ ಅತ್ತೆ ಜಯಶ್ರೀಯನ್ನು ಅಥಣಿ ಪೊಲೀಸರು ಬಂಧಿಸಿದ್ದು, ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



















