ಬೆಂಗಳೂರು: ನಗರದಲ್ಲಿ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗುತ್ತಲೇ ಇದ್ದು, ಇನ್ನೂ ನಿಲ್ಲುತ್ತಿಲ್ಲ. ಈಗ ಬಾಳೇಕುಂದ್ರಿ ಜಂಕ್ಷನ್ ಹತ್ತಿರ ಬಿದ್ದ ಬೃಹತ್ ಮರ ಉರುಳಿ ಬಿದ್ದಿದೆ.
ರಸ್ತೆಗೆ ಅಡ್ಡಲಾಗಿ ಈ ಬೃಹತ್ ಗಾತ್ರದ ಮರ ಬಿದ್ದ ಪರಿಣಾಮ ವಾಹನ ಸವಾರರು ಪರದಾಟ ನಡೆಸುವಂತಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮರ ರಸ್ತೆ ಮೇಲೆ ಬಿದ್ದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸಂಚಾರವನ್ನು ನಿಷೇಧಿಸಲಾಗಿದೆ.



















