ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾಗಿರುವ ನಟ ದರ್ಶನ್ ಸೇರಿದಂತೆ 17 ಜನರಿಗೆ ಜಾಮೀನು ಸಿಕ್ಕಿದೆ. ಆದರೆ, ಜಾಮೀನು ರದ್ದು ಮಾಡಬೇಕೆಂದು ಪೊಲೀಸರು, ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಸದ್ಯ ಈ ವಿಷಯದಲ್ಲಿ ಆರೋಪಿಗಳಿಗೆ ಬಿಗ್ ರಿಲೀಫ್ ಸಿಕ್ಕಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ 17 ಜನ ಆರೋಪಿಗಳು ಬರೋಬ್ಬರಿ 6 ತಿಂಗಳು ಕಾಲ ಜೈಲಿನಲ್ಲಿದ್ದರು. 20̄24ರಲ್ಲಿ ಎಲ್ಲ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಆದರೆ, ಈ ಪೈಕಿ 7 ಜನರಿಗೆ ಜಾಮೀನು ನೀಡಿದ್ದನ್ನು ಪೊಲೀಸರು ಪ್ರಶ್ನೆ ಮಾಡಿದ್ದಾರೆ. ಈಗ ದರ್ಶನ್ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ ಆಗಿದೆ.
ಸುಪ್ರೀಂಕೋರ್ಟ್ಗೆ ಬೇಸಿಗೆ ರಜೆ ಇದೆ. ಜುಲೈ 14ಕ್ಕೆ ಬೇಸಿಗೆ ರಜೆ ಅಂತ್ಯವಾಗಲಿದೆ. ಇದಾದ ಬಳಿಕ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ. ಹೀಗಾಗಿ ದರ್ಶನ್ ಮತ್ತು ಗ್ಯಾಂಗ್ ಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.



















