ತುಮಕೂರು: ರಾಸಾಯನಿಕ ಸಂಗ್ರಹಿಸುವ ಸಂಪ್ (Chemical Sump) ಕ್ಲೀನ್ ಗೆ ಇಳಿದಿದ್ದ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ.
ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮಧುಗಿರಿ (Madhugiri) ತಾಲೂಕಿನ ಮಾಗೋಡು ಗ್ರಾಮದ ಪ್ರತಾಪ್ (23) ಶಿರಾ ತಾಲೂಕಿನ ತರೂರು ಗ್ರಾಮದ ವೆಂಕಟೇಶ್ (32) ಸಾವನ್ನಪ್ಪಿರುವ ದುರ್ದೈವಿಗಳು.
ಸ್ವಚ್ಛಗೊಳಿಸಲು ನಾಲ್ವರು ಒಳಗೆ ಇಳಿದಿದ್ದರು. ಈ ವೇಳೆ ಉಸಿರಾಟದ ಸಮಸ್ಯೆ ಉಂಟಾಗಿ, ಇಬ್ಬರು ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.