ಸಮಾಜ ಸೇವಕ ಬೆಳ್ಳಾಡಿ ಅಶೋಕ್ ಶೆಟ್ಟಿ ಅವರು ಯಕ್ಷದ್ರುವ ಪಟ್ಲ ದಶಮಾನೋತ್ಸವಕ್ಕೆ 25 ಲಕ್ಷ ರೂ. ದೇಣಿಗೆ ನೀಡಿದ್ದಾರೆ.
ಉಳ್ತೂರು ಮೋಹನ್ ದಾಸ್ ಶೆಟ್ಟಿ ವಿಶೇಷ ಮನವಿಯ ಮೇರೆಗೆ ಟ್ರಸ್ಟ್ ನ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಅವರ ಆಪ್ತ ಅಭಿಮಾನಿಗಳಾದ ಅಶೋಕ್ ಶೆಟ್ಟಿ ದೇಣಿಗೆ ನೀಡಿದ್ದಾರೆ.
ಅಶೋಕ್ ಶೆಟ್ಟಿ ಅವರು ಶೈಕ್ಷಣಿಕ, ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿ ಈಗಾಗಲೇ ತಮ್ಮನ್ನು ತಾವು ಗುರುತಿಸಿಕೊಂಡು ಸಾಕಷ್ಟು ಸಮಾಜಮುಖಿ ಕಾರ್ಯಗಳನ್ನು ಮಾಡಿದ್ದಾರೆ. ಹಲವು ದೇವಸ್ಥಾನಗಳನ್ನು ಜೀರ್ಣೋದ್ಧಾರ ಮಾಡಿದ್ದಾರೆ. ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ಮಾಡಿ ಆಸಸೆಯಾಗಿದ್ದಾರೆ.

ಮೆರಿಟ್ & ಅರ್ಜುನ್ ಹಾಸ್ಪಿಟಲ್ ಸರ್ವಿಸಸ್ ಪ್ರೈ. ಲಿ ನ ಮಾಲೀಕರೂ ಆಗಿರುವ ಬೆಳ್ಳಾಡಿ ಅಶೋಕ್ ಶೆಟ್ಟಿ ಈಗ 25 ಲಕ್ಷ ರೂ. ದೇಣಿಗೆ ನೀಡಿದ್ದಕ್ಕೆ ಯಕ್ಷದ್ರುವ ಪಟ್ಲ ಕೇಂದ್ರ ಸಮಿತಿ ಧನ್ಯವಾದ ಅರ್ಪಿಸಿದೆ.
ಈ ವೇಳೆ ಕೇಂದ್ರ ಸಮಿತಿಯ ಗೌರವಾಧ್ಯಕ್ಷ ಡಾ. ಕನ್ಯಾನ ಸದಾಶಿವ ಶೆಟ್ಟಿ, ದಶಮಾನೋತ್ಸವ ಸಮಿತಿ ಗೌರವಾಧ್ಯಕ್ಷ ಡಾ. ಪ್ರಕಾಶ್ ಶೆಟ್ಟಿ ಬಂಜಾರ, ಬರೋಡ ಶಶಿಧರ ಶೆಟ್ಟಿ ಸೇರಿದಂತೆ ಸಮಿತಿಯ ಸದಸ್ಯರು ಇದ್ದರು.