ಕನ್ನಡ ಭಾಷೆಯ ಬಗ್ಗೆ ಹಗುರವಾಗಿ ಮಾತನಾಡಿದ ನಟ ಕಮಲ್ ಹಾಸನ್ ಸಿನಿಮಾಗಳನ್ನು ನಿಷೇಧಿಸುವಂತೆ ವಾಣಿಜ್ಯ ಮಂಡಳಿಗೆ ಪತ್ರ ಬರೆಯಲಾಗುವುದು ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಕನ್ನಡದ ನೆಲ, ಜಲ, ಭಾಷೆ ವಿಚಾರದಲ್ಲಿ ಯಾರೇ ಇದ್ದರೂ ಅದನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕಮಲ್ ಹಾಸನ್ ಅವರು ಕೂಡಲೇ ರಾಜ್ಯದ ಜನರ ಬಳಿ ಕ್ಷಮೆಯಾಚಿಸಬೇಕು. ಕನ್ನಡದ ಹಲವು ಚಿತ್ರಗಳಲ್ಲಿ ಕಮಲ್ ಹಾಸನ್ ನಟಿಸಿದ್ದಾರೆ.
ಓರ್ವ ಹಿರಿಯ ನಟ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ. ಅವರ ಚಿತ್ರಗಳ ಬಿಡುಗಡೆಗೆ ರಾಜ್ಯದಲ್ಲಿ ನಿಷೇಧ ಏರುವಂತೆ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆಯಲಾವುದು ಎಂದು ತಿಳಿಸಿದ್ದಾರೆ.
ನಟ ಶಿವರಾಜ್ ಕುಮಾರ್ ಅವರು ಅಲ್ಲಿಯೇ ಇದ್ದು ಈ ಬಗ್ಗೆ ಖಂಡನೆ ಮಾಡಿಲ್ಲ ಎಂಬ ಮಾಧ್ಯಮವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕನ್ನಡಕ್ಕಾಗಿ ರಾಜ್ ಕುಮಾರ್ ಅವರು ತನ್ನದೇ ಆದ ಕೊಡುಗೆ ನೀಡಿದ್ದಾರೆ. ಕನ್ನಡ ಕೂಡ ಅವರ ಕುಟುಂಬಕ್ಕೆ ಎಲ್ಲವನ್ನೂ ನೀಡಿದೆ. ಹೀಗಾಗಿ ನಟ ಶಿವರಾಜ್ ಕುಮಾರ್ ಅವರು, ಕಮಲ್ ಹಾಸನ್ ಅವರ ಹೇಳಿಕೆಯನ್ನು ಖಂಡಿಸಬೇಕಿತ್ತು ಎಂದಿದ್ದಾರೆ.