2002 ರಲ್ಲಿ ತೆರೆಕಂಡ ತುಳುವಾದೋ ಇಲಾಮಯ ಚಿತ್ರದ ಮೂಲಕ ಸಿನಿರಂಗಕ್ಕೆ ಎಂಟ್ರಿ ಕೊಟ್ಟ ಕಾಲಿವುಡ್ ಸ್ಟಾರ್ ಧನುಷ್, ಹಿನ್ನೆಲೆ ಗಾಯಕರೂ ಹೌದು. ಸಾಕಷ್ಟು ಅಭಿಮಾನಿ ಬಳಗವನ್ನು ಹೊಂದಿರುವ ಧನುಷ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಆಗಾಗ ಫೋಟೋ ಅಪ್ಲೋಡ್ ಮಾಡುತ್ತಾ ಅಭಿಮಾನಿಗಳಿಗೆ ಸರ್‌ಪ್ರೈಸ್ ಜೊತೆಗೆ ಶಾಕ್ ಕೂಡ ಕೊಡುತ್ತಿರುತ್ತಾರೆ.
ಇದೀಗ ತಮ್ಮ ಹೆಂಡತಿ ಜೊತೆ ಫೋಟೋ ಅಪ್ಲೋಡ್ ಮಾಡಿ ಶಾಕ್ ಕೊಟ್ಟಿದ್ದಾರೆ. ಧನುಷ್ ಹಾಗೂ ಐಶ್ವರ್ಯ ಮಗನ ಜೊತೆ ಒಟ್ಟಿಗೆ ಕಾಣಿಕೊಂಡಿರುವ ಫೋಟೊ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಧನುಷ್ ಅವರು ರಜನಿಕಾಂತ್ ಪುತ್ರಿ ಐಶ್ವರ್ಯಾ ಜೊತೆ 2004ರಲ್ಲಿ ಮದುವೆ ಆಗಿದ್ದರು. 20 ವರ್ಷಗಳ ಬಳಿಕ, ಅಂದರೆ 2024ರಲ್ಲಿ ಅವರು ವಿಚ್ಛೇದನ ಪಡೆದುಕೊಂಡರು. ಈ ಜೋಡಿಗೆ ಯಾತ್ರ ಮತ್ತು ಲಿಂಗ ಎಂಬಿಬ್ಬರು ಗಂಡು ಮಕ್ಕಳು ಇದ್ದಾರೆ. ಡಿವೋರ್ಸ್ ಪಡೆದಿದ್ದರೂ ಕೂಡ ಪಾಲಕರಾಗಿ ತಮ್ಮ ಜಬಾಬ್ದಾರಿಯನ್ನು ಐಶ್ವರ್ಯಾ ರಜನಿಕಾಂತ್ ಹಾಗೂ ಧನುಷ್ ಅವರು ನಿಭಾಯಿಸುತ್ತಿದ್ದಾರೆ.
ಹಿರಿಯ ಮಗ ಯಾತ್ರ ಸಲುವಾಗಿ ಐಶ್ವರ್ಯಾ ಮತ್ತು ಧನುಷ್ ಮತ್ತೆ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಯಾತ್ರ ಈಗ ಹೈಸ್ಕೂಲ್ ವಿದ್ಯಾಭ್ಯಾಸ ಪೂರ್ಣಗೊಳಿಸಿದ್ದಾರೆ. ಮಗನ ಹೈಸ್ಕೂಲ್ ಗ್ರಾಜುಯೇಷನ್ ಕಾರ್ಯಕ್ರಮದಲ್ಲಿ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್ ಪಾಲ್ಗೊಂಡಿದ್ದಾರೆ. ಮಗನ ವಿದ್ಯಾಭ್ಯಾಸಕ್ಕೆ ಬೆಂಬಲ ನೀಡುವ ಸಲುವಾಗಿ ಅವರಿಬ್ಬರು ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಧನುಷ್, ಐಶ್ವರ್ಯಾ ಹಾಗೂ ಯಾತ್ರ ಒಟ್ಟಿಗೆ ಇರುವ ಫೋಟೋ ನೋಡಿ ಅಭಿಮಾನಿಗಳಂತೂ ಫುಲ್ ಖುಷಿಯಾಗಿದ್ದು, ಮತ್ತೆ ಒಂದಾಗಿ ಎಂದು ಕಮೆಂಟ್ ಮಾಡುತ್ತಿದ್ದಾರೆ. ಹಲವರು ಈ ಜೋಡಿಗೆ ಕೆಟ್ಟ ದೃಷ್ಟಿ ಬೀಳುವುದು ಬೇಡ ಎಂದು ಕಮೆಂಟ್ ಮಾಡುತ್ತಿದ್ದಾರೆ. ಒಟ್ಟಾರೆ ಅಭಿಮಾನಿಗಳು ಈ ಜೋಡಿ ಕಂಡು ಖುಷಿ ಪಟ್ಟು, ಹಾರೈಸುತ್ತಿದ್ದಾರೆ.



















