ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮಳೆ ಚುರುಕಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ರಾಜ್ಯದ ಕರಾವಳಿಯಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಇನ್ನುಳಿದಂತೆ ಉತ್ತರ ಕರಾವಳಿ, ದಕ್ಷಿಣ ಕರಾವಳಿ, ಮಲೆನಾಡಿನ ಹಲವು ಪ್ರದೇಶಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಹಾವೇರಿ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.