ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಸ್ಟೇಡಿಯಂನಲ್ಲಿ (Chinnaswamy Stampede) ಕಾಲ್ತುಳಿತ ಉಂಟಾಗಿ 11 ಜನ ಸಾವನ್ನಪ್ಪಿರುವ ಘಟನೆಗೆ ಇಡೀ ದೇಶವೇ ಮಮ್ಮಲ ಮರಗುತ್ತಿದೆ. ಈ ಘಟನೆ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ (G Parameshwar) ಮಾತನಾಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವೇಳೆ ಸಾವನ್ನಪ್ಪಿದವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ ನೀಡಲಾಗಿದೆ. ತನಿಖೆಯ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಘಟನೆಯಲ್ಲಿ 11 ಜನ ಸಾವನ್ನಪ್ಪಿದ್ದು, 56 ಜನ ಗಾಯಗೊಂಡಿದ್ದಾರೆ. 46 ಗಾಯಾಳುಗಳು ಮನೆಗೆ ಹೋಗಿದ್ದಾರೆ. 10 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವವರು ಕೂಡ ಗಂಭೀರವಾಗಿಲ್ಲ. ಹೀಗಾಗಿ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ.
ಇಂತಹ ವಿಷಯ ಬಂದಾಗ ಪೊಲೀಸ್ ನಿರ್ದೇಶನಗಳ ಚೌಕಟ್ಟಿನೊಳಗೇ ಮಾಡುತ್ತೇವೆ. ಈ ಹಿನ್ನೆಲೆಯಲ್ಲಿ ಹೊಸ ಎಸ್ಒಪಿ ಮಾಡುತ್ತೇವೆ ಎಂದಿದ್ದಾರೆ.