ಕೋಲಾರ: RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತಕ್ಕೆ ಸಿಲುಕಿ ಸಾವನ್ನಪ್ಪಿದ್ದ ಸಹನಾ ಅಂತ್ಯಕ್ರಿಯೆಯನ್ನು ಹುಟ್ಟೂರು ಬಡಮಾಕನಹಳ್ಳಿ ಗ್ರಾಮದಲ್ಲಿ ನೆರವೇರಿಸಲಾಯಿತು.
ಒಕ್ಕಲಿಗ ಸಮಾಜದ ವಿಧಿ ವಿಧಾನದಂತೆ ಅಂತ್ಯಕ್ರಿಯೆಯನ್ನು ನಡೆಸಲಾಗಿದೆ. ಅಂತ್ಯಕ್ರಿಯೆ ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಅಂತ್ಯಕ್ರಿಯೆಯಲ್ಲಿ ಸ್ನೇಹಿತರು, ಸಹೋದ್ಯೋಗಿಗಳು ಹಾಗೂ ಹಲವಾರು ಗ್ರಾಮಸ್ಥರು ಭಾಗಿಯಾಗಿದ್ದರು.



















