ಬೈಂದೂರು: ನಾವುಂದ ಲಯನ್ಸ್ ಕ್ಲಬ್ ಗೆ ಪ್ರಸಕ್ತ ಸಾಲಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇತ್ತೀಚೆಗೆ ನಡೆಯಿತು.
ಕ್ಲಬ್ ನ 2025-26ನೇ ಸಾಲಿನ ಅಧ್ಯಕ್ಷರಾಗಿ ನಿತ್ಯಾನಂದ ಆಚಾರ್ಯ ಆಯ್ಕೆಯಾಗಿದ್ದಾರೆ. ಇನ್ನುಳಿದಂತೆ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ ಪೂಜಾರಿ, ಖಜಾಂಚಿಯಾಗಿ ವಿಜೇತ್ ಪೂಜಾರಿ ಆಯ್ಕೆಯಾಗಿದ್ದಾರೆ. ಸದಸ್ಯರು ಬಹುಮತದಿಂದ ಆಯ್ಕೆ ಮಾಡಿದ್ದಾರೆ.