ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತದಲ್ಲಿ 11 ಜನ ಪ್ರಾಣ ಕಳೆದುಕೊಂಡಿದ್ದು, 50ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ಈ ವಿಷಯವಾಗಿ ಈಗಾಗಲೇ ತನಿಖೆ ನಡೆಯುತ್ತಿದೆ. ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಮಧ್ಯೆ ವಿರಾಟ್ ಕೊಹ್ಲಿ ವಿರುದ್ಧ ಕೂಡ ದೂರು ದಾಖಲಾಗಿದೆ.
ಆರ್ ಸಿಬಿ ತಂಡದ ಆಟಗಾರ ವಿರಾಟ್ ಕೊಹ್ಲಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್.ಎಂ. ವೆಂಕಟೇಶ್ ಎಂಬುವವರು ದೂರು ದಾಖಲಿಸಿದ್ದಾರೆ. ಈಗಾಗಲೇ ದಾಖಲಾಗಿರುವ ದೂರಿನಲ್ಲಿಯೇ ಪರಿಗಣಿಸಲಾಗುವುದು ಎಂದು ಪೊಲೀಸರು ಹಿಂಬರಹ ಬರೆದಿದ್ದಾರೆ.