ಬೆಂಗಳೂರು: ಇಲ್ಲಿನ ಶಿವಾನಂದ ಸರ್ಕಲ್ ಬಳಿ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡಿರುವ ಘಟನೆ ನಡೆದಿದೆ.
ಇಂದು ಬೆಳಗಿನ ಜಾವ 4:30 ರ ಸುಮಾರಿಗೆ ಈ ಘಟನೆ ನಡೆದಿದೆ. ಒಂದೇ ಕುಟುಂಬದ ನಾಲ್ವರು ಕಾರಿನಲ್ಲಿ ಭದ್ರಪ್ಪ ಲೇಔಟ್ ನಿಂದ ಮೆಜೆಸ್ಟಿಕ್ ರೈಲ್ವೇ ನಿಲ್ದಾಣದ ಕಡೆಗೆ ತೆರಳುತ್ತಿದ್ದರು. ಇಬ್ಬರು ಮಕ್ಕಳು ಸೇರಿದಂತೆ ಯುಸೂಫ್ ಕುಟುಂಬದ ನಾಲ್ವರು ಪ್ರಯಾಣಿಸುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ಡಿಕ್ಕಿ ಹೊಡೆದ ತೀವ್ರತೆಗೆ ಡಿವೈಡರ್ ಪುಡಿ ಪುಡಿಯಾಗಿದೆ. ಸ್ಥಳಕ್ಕೆ ಹೈಗ್ರೌಂಡ್ಸ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



















