ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ದೋಸ್ತಿಗಳು ಸಿಡಿದೆದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತದ ಪ್ರಕೆರಣವನ್ನ ರಾಜ್ಯಪಾಲರ ಅಂಗಳಕ್ಕೆ ಕೊಂಡೊಯ್ದಿದ್ದಾರೆ.
ಕಾಲ್ತುಳಿತ ಕೇಸ್ ಸೇರಿ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಲು ಬಿಜೆಪಿ-ಜೆಡಿಎಸ್ ದೋಸ್ತಿ ತಂಡ ಮುಂದಡಿ ಇಟ್ಟಿದೆ. ಕಾಲ್ತುಳಿತ ಕೇಸ್ನ್ನ ಗಂಭೀರವಾಗಿ ಪರಿಗಣಿಸಿರುವ ದೋಸ್ತಿ ಟೀಂ, ಈಗಾಗ್ಲೇ ಕಾಂಗ್ರೆಸ್ ಸರ್ಕಾರದ ವಿರುದ್ಧ ಗುಡುಗಿದೆ. ನಿನ್ನೆ ಜಂಟಿ ಸುದ್ದಿಗೋಷ್ಠಿ ನಡೆಸಿ ಸರ್ಕಾರದ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ. ಆರ್. ಅಶೋಕ್, ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದರು.