ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಬರ್ಚಿನಹಳ್ಳಿ ತಿರುವಿನ ಹತ್ತಿರ ನಡೆದಿದೆ.
ಖಾಸಗಿ ಬಸ್ ಬೆಂಗಳೂರಿನ ಮಂಗಳೂರು ಕಡೆಗೆ ಬರುತ್ತಿತ್ತು ಎನ್ನಲಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ಪಲ್ಟಿಯಾಗಿದೆ. ಬಸ್ ನಲ್ಲಿದ್ದ 30 ಪ್ರಯಾಣಿಕರ ಪೈಕಿ 16 ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಮಂಗಳೂರು ಮತ್ತು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರು ತಮ್ಮ ಊರಿಗೆ ತೆರಳುತ್ತಿದ್ದರು ಎನ್ನಲಾಗಿದೆ. ಉಪ್ಪಿನಂಗಡಿ ಪೋಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.