ಬೆಂಗಳೂರು: ಸೂಟ್ ಕೇಸ್ ನಲ್ಲಿ ಬಾಲಕಿಯ ಶವ ಇಟ್ಟು ಪರಾರಿಯಾಗಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಂದಾಪುರ ರೈಲ್ವೆ ಬ್ರಿಡ್ಜ್ (Chandapura Railway Bridge) ಬಳಿ ಬಾಲಕಿ ಕೊಲೆ ಮಾಡಿ ಸೂಟ್ ಕೇಸ್ ನಲ್ಲಿ (Suitcase) ಶವ ಇಟ್ಟು ಪರಾರಿಯಾಗಿದ್ದ ಪ್ರಕರಣವನ್ನು ಕೊನೆಗೂ ಪೊಲೀಸರು ಬೇಧಿಸಿದ್ದಾರೆ. ಅಲ್ಲದೇ, ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ಆರೋಪಿಗಳನ್ನು ಬೆಂಗಳೂರು (Bengaluru) ಪೊಲೀಸರು ಬಂಧಿಸಿದ್ದಾರೆ. ಎಲ್ಲ 7 ಜನ ಆರೋಪಿಗಳು ಬಿಹಾರ (Bihar) ಮೂಲದವರು ಎನ್ನಲಾಗಿದೆ.
ಆಶಿಕ್ ಕುಮಾರ್, ಮುಖೇಶ್ ಮತ್ತು ರಾಜಾರಾಮ್ ಮೋಹನ್ ಸೇರಿದಂತೆ 7 ಜನರನ್ನು ಬಂಧಿಸಲಾಗಿದೆ. ಈ ಘಟನೆ ಮೇ 21ರಂದು ನಡೆದಿತ್ತು. ಆದರೆ, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.