ಬೆಂಗಳೂರು: ರಾಜ್ಯದ ಈ ಜಿಲ್ಲೆಗಳಲ್ಲಿ ಜೂ. 12ರಿಂದ ಭಾರೀ ಮಳೆಯ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನುಳಿದಂತೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ಬೆಳಗಾವಿ, ಧಾರವಾಡ, ವಿಜಯಪುರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೊಡಗು, ವಿಜಯನಗರ, ಬೀದರ್, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಚುರುಕು ಪಡೆಯುತ್ತಿರುವುದರಿಂದಾಗಿ ರೈತರು ಸಂತಸ ವ್ಯಕ್ತಪಡಿಸುತ್ತಿದ್ದಾರೆ.