ನವದೆಹಲಿ: ಕೇಂದ್ರ ಸರ್ಕಾರದ ಕ್ರೀಡಾ ಇಲಾಖೆ ವ್ಯಾಪ್ತಿಗೆ ಬರುವ ಭಾರತೀಯ ಕ್ರೀಡಾ ಪ್ರಾಧಿಕಾರದ (Sports Authority of India) ಕಚೇರಿಯಲ್ಲಿ ಖಾಲಿ ಇರುವ 10 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 10 ಜೂನಿಯರ್ ಎಂಜಿನಿಯರ್ ಮತ್ತು ಶೆಫ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಆಫ್ ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ.
ಜೂನ್ 18 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. sportsauthorityofindia.nic.in ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅಧಿಸೂಚನೆಯನ್ನು ಓದಬಹುದು. ಹಾಗೆಯೇ, ಅರ್ಜಿಯನ್ನು ಡೌನ್ ಲೋಡ್ ಮಾಡಿಕೊಂಡು ಸಲ್ಲಿಸಬಹುದಾಗಿದೆ. ಮೂರು ಜೂನಿಯರ್ ಎಂಜಿನಿಯರ್ ಹಾಗೂ ಏಳು ಮುಖ್ಯ ಬಾಣಸಿಗ (ಶೆಫ್) ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಜೂನಿಯರ್ ಎಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಡಿಪ್ಲೋಮಾ, ಬಿ.ಇ, ಬಿ.ಟೆಕ್ ಕೋರ್ಸ್ ಗಳನ್ನು ಮುಗಿಸಿರಬೇಕು. ಶೆಫ್ ಹುದ್ದೆಗೆ ಅರ್ಜಿ ಸಲ್ಲಿಸುವವರು , ಬಿಎ, ಬಿಎಸ್ಸಿ, ಬ್ಯಾಚುಲರ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ & ಕ್ಯಾಟರಿಂಗ್ ಟೆಕ್ನಾಲಜಿ ಕೋರ್ಸ್ ಮುಗಿಸಿರಬೇಕು ಎಂದು ತಿಳಿಸಲಾಗಿದೆ. ಜೂನಿಯರ್ ಎಂಜಿನಿಯರ್ ಹುದ್ದೆಗೆ 1.12 ಲಕ್ಷ ರೂ. ಸಂಬಳ ನೀಡಲಾಗುತ್ತದೆ. ಶೆಫ್ ಹುದ್ದೆಗೆ ನೇಮಕಾತಿ ಹೊಂದಿದವರಿಗೆ 1 ಲಕ್ಷ ರೂ.ವರೆಗೆ ಸಂಬಳ ಇದೆ.
ಭಾರತೀಯ ಕ್ರೀಡಾ ಪ್ರಾಧಿಕಾರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 56 ವರ್ಷ ಎಂದು ತಿಳಿಸಲಾಗಿದೆ. ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. Dy. ನಿರ್ದೇಶಕರು (ನೇಮಕಾತಿ), ಕೊಠಡಿ ಸಂಖ್ಯೆ. 209, ಭಾರತೀಯ ಕ್ರೀಡಾ ಪ್ರಾಧಿಕಾರ, ಪ್ರಧಾನ ಕಚೇರಿ, ಗೇಟ್ ಸಂಖ್ಯೆ. 10 (ಪೂರ್ವ ದ್ವಾರ), ಜವಾಹರ ಲಾಲ್ ನೆಹರು ಕ್ರೀಡಾಂಗಣ, ಲೋಧಿ ರಸ್ತೆ, ನವದೆಹಲಿ-110003 ವಿಳಾಸಕ್ಕೆ ಅರ್ಜಿಗಳನ್ನು ಕಳುಹಿಸಬಹುದು.