ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 13ರ ನಂತರ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇನ್ನುಳಿದಂತೆ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದ್ದು ಮೂರು ದಿನಗಳ ನಂತರ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮೂರು ದಿನಗಳ ನಂತರ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿ ಬುಧವಾರದಿಂದ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.