ಬೆಂಗಳೂರು: ಮಧ್ಯರಾತ್ರಿ ಎರಡು ಗುಂಪುಗಳ ಮಧ್ಯೆ ಹೊಡೆದಾಟ ನಡೆದಿರುವ ಘಟನೆಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಕೋರಮಂಗಲ ಜ್ಯೋತಿನಿವಾಸ ಕಾಲೇಜು ಬಳಿ ಈ ಘಟನೆ ನಡೆದಿದೆ. ಎರಡು ಗುಂಪುಗಳು ಪರಸ್ಪರ ಕಲ್ಲು ಎಸೆದು ಗಲಾಟೆ ಮಾಡಿಕೊಂಡಿವೆ. ಜೂನ್ 7 ರಂದು ಮಧ್ಯರಾತ್ರಿ 1.30 ಸುಮಾರಿಗೆ ಈ ಘಟನೆ ನಡೆದಿದೆ. ಘಟನೆಯ ದೃಶ್ಯಗಳು ಮೊಬೈಲ್ ನಲ್ಲಿ ಸೆರೆಯಾಗಿವೆ. ಘಟನೆಯಲ್ಲಿ ಓರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೋರ್ವ ಗಾಯಗೊಂಡಿದ್ದಾನೆ. ಈ ಕುರಿತು ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕುಡಿದ ಮತ್ತಿನಲ್ಲಿ ಈ ಕಿರಿಕ್ ನಡೆದಿರುವ ಕುರಿತು ವರದಿಯಾಗಿದೆ. ಸದ್ಯ ದೃಶ್ಯಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೇಲ್ನೋಟಕ್ಕೆ ಯುವತಿ ವಿಚಾರವಾಗಿ ಗಲಾಟೆ ನಡೆದಿದೆ ಎನ್ನಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.



















