ಕನ್ನಡ ಹುಟ್ಟಿನ ಬಗ್ಗೆ ಮಾತನಾಡಿ ಹೈಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡಿರುವ ನಟ ಕಮಲ್ ಹಾಸನ್ ಗೆ ಸುಪ್ರೀಂ ಕೋರ್ಟ್ ಶಾಕ್ ಕೊಟ್ಟಿದೆ. ಕರ್ನಾಟಕದಲಿ ಥಗ್ ಲೈಫ್ ಚಿತ್ರ ಬಿಡುಗಡೆಗೆ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನ ತುರ್ತಾಗಿ ವಿಚಾರಣೆ ನಡೆಸಲು ಸಾಧ್ಯವಿಲ್ಲ ಅಂತಾ ಕಡ್ಡಿ ಮುರಿದಂತೆ ಹೇಳಿದೆ.
ತಮಿಳಿನಿಂದ ಕನ್ನಡ ಹುಟ್ಟಿದೆ ಅಂತಾ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದರು. ಥಗ್ ಲೈಫ್ ಚಿತ್ರದ ಈವೆಂಟ್ ವೇಳೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮುಂದೆಯೇ ಕಮಲ್ ಅಸಂಬದ್ಧ ಹೇಳಿಕೆ ಕೊಟ್ಟಿದ್ದರು. ಇದು ಕನ್ನಡಿಗರನ್ನ ಕೆರಳಿಸಿತ್ತು. ಹೀಗಾಗಿ ಥಗ್ ಲೈಪ್ ಚಿತ್ರವನ್ನ ಕರ್ನಾಟಕದಲ್ಲಿ ಬಿಡುಗಡೆ ಮಾಡದಂತೆ ಆಕ್ರೋಶ ವ್ಯಕ್ತವಾಗಿತ್ತು. ಹೀಗಾಗಿ ಕಮಲ್ ಹಾಸನ್ ಮತ್ತು ಚಿತ್ರ ತಂಡ ಸುಪ್ರೀಂ ಕೋರ್ಟ್ ಕದ ತಟ್ಟಿತ್ತು.
ಇಂದು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಮಿಶ್ರಾ ಪೀಠ, ತುರ್ತಾಗಿ ಅರ್ಜಿ ವಿಚಾರಣೆ ನಡೆಸಲು ಸಾಧ್ಯವಿಲ್ಲ ಅಂತಾ ಹೇಳಿದೆ. ಹೈಕೋರ್ಟ್‌ನಲ್ಲೇ ಇನ್ನೊಮ್ಮೆ ಅರ್ಜಿ ಸಲ್ಲಿಸಿ ಅಂತಾ ಅರ್ಜಿದಾರರಿಗೆ ಸೂಚಿಸಿದೆ. ಆ ಮೂಲಕ ಥಗ್ ಲೈಫ್ ಚಿತ್ರ ಕರ್ನಾಟಕದಲ್ಲಿ ಬಿಡುಗಡೆ ಸದ್ಯಕ್ಕೆ ಇಲ್ಲ ಅನ್ನೋದು ಸ್ಪಷ್ಟವಾಗಿದೆ.



















