ಕಾನೂನು ಉಲ್ಲಂಘನೆಯಾಗಿದ್ದರೆ ಯಾವುದೇ ಕಾರಣಕ್ಕೂ ಸಪೋರ್ಟ್ ಮಾಡುವ ಪ್ರಶ್ನೆಯೇ ಇಲ್ಲಾ. ಕಾಂಗ್ರೆಸ್ ನಾಯಕರ ಮೇಲಿನ ಇಡಿ ದಾಳಿಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ ಮಾತನಾಡಿದ ಸಿಎಂ, ಇಡಿ ತನ್ನ ಕೆಲಸ ಮಾಡುತ್ತಿದೆ, ಮಾಡ್ಲಿ. ಈ ವಿಚಾರದಲ್ಲಿ ಯಾರನ್ನೂ ಬೆಂಬಲಿಸುವ ಪ್ರಶ್ನೆಯೇ ಇಲ್ಲಾ. ಅಧಿಕಾರಿಗಳು ಏನ್ ಮಾಡಬೇಕೊ ಅದನ್ನು ಮಾಡಲಿ ಅಂತಾ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.



















