ಫಾದರ್ ಅಂದಾಕ್ಷಣ ನೆನಪಾಗುವುದೇ ಬೆಚ್ಚನೆಯ ಪ್ರೀತಿ. ಅದೊಂದು ರೀತಿ ಕಾಳಜಿಯ ಸಂಕೇತ. ಸುಂದರ ಬದುಕು ರೂಪಿಸುವ ಜೀವ. ಅಂತಹ ಫಾದರ್ ಕುರಿತ ಈಗಾಗಲೇ ಹಲವು ಕಥೆಗಳಿವೆ. ಸಿನಿಮಾಗಳೂ ಅಪ್ಪಳಿಸಿವೆ. ಆ ಸಾಲಿಗೆ ಅಪರೂಪದ ಕಥಾಹಂದರ ಹೊಂದಿರುವ ಆರ್.ಸಿ.ಸ್ಟುಡಿಯೋಸ್ ನಿರ್ಮಾಣದ “ಫಾದರ್” ಚಿತ್ರ ಇದೀಗ ಪ್ರೇಕ್ಷಕರ ಮುಂದೆ ಬರಲು ತಯಾರಿ ನಡೆಸುತ್ತಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ಸ್ ತಯಾರಿಯಲ್ಲಿರುವ ಸಿನಿಮಾ ತೆರೆಗೆ ಬರಲು ಸಜ್ಜಾಗುತ್ತಿದೆ.
ಜೂನ್ 12 “ಫಾದರ್” ಚಿತ್ರದ ನಾಯಕ ಡಾರ್ಲಿಂಗ್ ಕೃಷ್ಣ ಅವರ ಹುಟ್ಟುಹಬ್ಬ. ನಾಯಕನ ಹುಟ್ಟು ಹಬ್ಬಕ್ಕೆ ವಿಭಿನ್ನ ಹಾಗೂ ವಿಶೇಷ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಆರ್ ಸಿ ಸ್ಟುಡಿಯೋಸ್ ಹಾಗೂ ಚಿತ್ರತಂಡ ಡಾರ್ಲಿಂಗ್ ಕೃಷ್ಣ ಅವರಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿದೆ.

ಆರ್.ಸಿ. ಸ್ಟುಡಿಯೋಸ್ ಮೂಲಕ ಹೊರಬರುತ್ತಿರುವ ಈ “ಫಾದರ್” ಚಿತ್ರವು ನೋಡುಗರಿಗೊಂದು ಭಾವುಕ ಪಯಣಕ್ಕೆ ಕರೆದೊಯ್ಯುವ ಹೃದಯ ಸ್ಪರ್ಶಿ ಚಿತ್ರ. “ಫಾದರ್” ಅಂದರೇನೆ ಅದೊಂದು ಶಕ್ತಿ. ಅಂತಹ ಶಕ್ತಿಯುತ ಸಿನಿಮಾದ ಹೈಲೆಟ್ ಅಂದರೆ ಪ್ರಕಾಶ್ ರಾಜ್. ಅವರೇ ಇಲ್ಲಿ “ಫಾದರ್”. ಇನ್ನು, ಡಾರ್ಲಿಂಗ್ ಕೃಷ್ಣ ಕೂಡ ಪ್ರಮುಖ ಆಕರ್ಷಣೆ. ಇವರಿಬ್ಬರ ಕಾಂಬೋದಲ್ಲಿ ಬರುತ್ತಿರುವ “ಫಾದರ್” ಈಗಾಗಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಅದಕ್ಕೆ ಕಾರಣ, “ಲವ್ ಮಾಕ್ಟೇಲ್” ಜೋಡಿ ಇಲ್ಲೂ ಒಂದಾಗಿದೆ. ಡಾರ್ಲಿಂಗ್ ಕೃಷ್ಣ ಅವರ ಜೊತೆ ಅಮೃತಾ ಅಯ್ಯಂಗಾರ್ ಇದ್ದಾರೆ ಎನ್ನುವುದು ಮತ್ತೊಂದು ಸ್ಪೆಷಲ್. ಇವರೊಂದಿಗೆ ಅನೇಕ ನುರಿತ ಕಲಾವಿದರು ಚಿತ್ರದ ತಾರಾ ಬಳಗದಲ್ಲಿದ್ದಾರೆ. ಅಲ್ಲಿಗೆ “ಫಾದರ್” ಸಿನಿಮಾದ ಕುತೂಹಲ ಮತ್ತಷ್ಟು ಹೆಚ್ಚಿದೆ.
ಇದೊಂದು ನಿರೀಕ್ಷೆಯ ಸಿನಿಮಾ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿರುವ ಸಿನಿಮಾ ಸಾಕಷ್ಟು ಕುತೂಹಲ ಹೊಂದಿದೆ. ಅದಕ್ಕೆ ಕಾರಣ ಕಥೆ ಮತ್ತು ಪಾತ್ರಗಳು. ಮೈಸೂರು, ಧರ್ಮಸ್ಥಳ, ಮಂಗಳೂರು, ಬೆಂಗಳೂರು ಮುಂತಾದ ಕಡೆಗಳಲ್ಲಿ ಚಿತ್ರೀಕರಣಗೊಂಡಿರುವ ಈ ಸಿನಿಮಾಗೆ ವಾರಣಾಸಿಯಲ್ಲೂ ಚಿತ್ರೀಕರಣವಾಗಿದೆ. ಮುಂಬೈನ ಖ್ಯಾತ ಉದ್ಯಮಿ ಆನಂದ್ ಪಂಡಿತ್ ಅರ್ಪಿಸುವ, ಅಲಂಕಾರ್ ಪಾಂಡ್ಯನ್ ಅವರ ಸಹಯೋಗದಲ್ಲಿ ಆರ್.ಸಿ.ಸ್ಟುಡಿಯೋಸ್ ಈ ಸಿನಿಮಾ ನಿರ್ಮಿಸಿದರೆ, ರಾಜ್ ಮೋಹನ್ ನಿರ್ದೇಶನ ಮಾಡಿದ್ದಾರೆ. ಸುಜ್ಞಾನ್ ಛಾಯಾಗ್ರಹಣವಿದೆ. ನಕುಲ್ ಅಭಯಂಕರ್ ಸಂಗೀತ ಸಂಯೋಜನೆ “ಫಾದರ್” ಚಿತ್ರಕ್ಕಿದೆ.



















