ಕಾರವಾರ: ಕಾರವಾರ ಸುರಂಗ ಮಾರ್ಗದ ಹೆಬ್ಬಾಗಿಲಿನಲ್ಲಿ ಗುಡ್ಡ ಕುಸಿದ ಪರಿಣಾಮ ಕಲ್ಲು, ಮಣ್ಣು ಕುಸಿದು ಬೀಳುತ್ತಿದೆ. ಹೀಗಾಗಿ ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.
ಈ ನಿಟ್ಟಿನಲ್ಲಿ ಸುರಂಗ ಮಾರ್ಗದಲ್ಲಿ ಸಂಚಾರ ನಿರ್ಬಂಧ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅತಿಯಾದ ಮಳೆಗೆ ಕಲ್ಲು. ಮಣ್ಣು ಕುಸಿಯುತ್ತಿದೆ. ಗುಡ್ಡ- ಬೆಟ್ಟಗಳು ಕುಸಿಯುವ ಆತಂಕ ವ್ಯಕ್ತವಾಗುತ್ತಿದೆ. ಹೀಗಾಗಿ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.